ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಹೆನ್ರಿಕ್ ಕ್ಲಾಸೆನ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ಈ ನಿರ್ಧಾರಕ್ಕೆ ಪ್ರಮುಖ ಕಾರಣವೆಂದರೆ ಅವರ ಕುಟುಂಬದೊಂದಿಗೆ ಹೆಚ್ಚು ಸಮಯ ನೀಡುವುದಾಗಿದೆ ಎಂದು ತಿಳಿಸಿದ್ದಾರೆ ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ನನ್ನ ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯಲು ನಾನು ಎದುರು ನೋಡುತ್ತಿದ್ದೇನೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಸರಿಯಲು ನಿರ್ಧರಿಸಿದ್ದೇನೆ ಎಂದು ಘೋಷಿಸುತ್ತಿರುವ ಈ ದಿನ ನನಗೆ ದುಃಖದ ದಿನ. ನಾನು ಜೀವನಪರ್ಯಂತ ಅಮೂಲ್ಯವಾದ ಉತ್ತಮ ಸ್ನೇಹ ಮತ್ತು ಸಂಬಂಧಗಳನ್ನು ಹೊಂದಿದ್ದೇನೆ ಎಂದಿದ್ದಾರೆ.
ಫೆಬ್ರವರಿ 2018 ರಲ್ಲಿ ಕೇಪ್ ಟೌನ್ ನಲ್ಲಿ ಭಾರತ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ಹೆನ್ರಿಕ್ ಕ್ಲಾಸೆನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು, ಕಳೆದ ನಾಲ್ಕು ವರ್ಷಗಳಲ್ಲಿ, ಅವರು ODI ಮತ್ತು T20 ಎರಡರಲ್ಲೂ ಮಧ್ಯಮ ಕ್ರಮಾಂಕದಲ್ಲಿ ಅತ್ಯಂತ ಶಕ್ತಿಶಾಲಿ ಸ್ಟ್ರೈಕರ್‌ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದರು, ಕ್ಲಾಸೆನ್ ದಕ್ಷಿಣ ಆಫ್ರಿಕಾ ಪರ 4 ಅಂತರರಾಷ್ಟ್ರೀಯ ಶತಕಗಳು ಸೇರಿದಂತೆ 2,141 ಏಕದಿನ ರನ್‌ಗಳು, 1,000 ಟಿ20ಐ ರನ್‌ಗಳು ಮತ್ತು 104 ಟೆಸ್ಟ್ ರನ್‌ಗಳನ್ನು ಗಳಿಸಿದ್ದಾರೆ.