ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ವೆಸ್ಟ್ ಇಂಡೀಸ್ ಆಟಗಾರ ನಿಕೋಲಸ್ ಪೂರನ್

ಕಿಂಗ್‌ಸ್ಟನ್‌: ವೆಸ್ಟ್‌ ಇಂಡೀಸ್‌ ತಂಡದ ಟಿ-20 ಅತ್ಯುತ್ತಮ ಬ್ಯಾಟರ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.
ದಕ್ಷಿಣ ಆಫ್ರಿಕಾದ ವಿಕೆಟ್-ಕೀಪರ್ ಬ್ಯಾಟರ್ ಹೆನ್ರಿಚ್ ಕ್ಲಾಸೆನ್, ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಪೂರನ್ ಈ ನಿರ್ಧಾರ ಘೋಷಿಸಿದ್ದು ಈ ಕುರಿತಂತೆ ಸಾಮಾಜಿಕ ಜಾಲತಾಣ ಫೋಸ್ಟ್ ಮಾಡಿದ್ದು ಹೆಚ್ಚು ಚಿಂತನೆ ಮತ್ತು ಚರ್ಚೆಯ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ. ಈ ಮೂಲಕ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. 29 ವರ್ಷದ ಪೂರನ್ ವಿಕೆಟ್ ಕೀಪರ್ ಹಾಗೂ ಬ್ಯಾಟರ್ ಆಗಿ 106 ಪಂದ್ಯಗಳಲ್ಲಿ ಆಡಿದ್ದಾರೆ. ಟಿ-20 ಪಂದ್ಯಗಳಲ್ಲಿ ವೆಸ್ಟ್ ಇಂಡೀಸ್ ಪರ ಅತಿ ಹೆಚ್ಚು 2,275 ರನ್ ಗಳಿಸಿದ ಆಟಗಾರ ಆಗಿದ್ದಾರೆ. ಲಕ್ನೋ ಸೂಪರ್‌ ಜೈಂಟ್ಸ್‌ನಲ್ಲಿ ದುಬಾರಿ ಬೆಲೆಯ ಆಟಗಾರನಾಗಿದ್ದಾರೆ. ದುಬೈ ಕ್ರಿಕೆಟ್ ಲೀಗ್‌ನಲ್ಲೂ ಸಕ್ರಿಯವಾಗಿರುವ ಪೂರನ್‌ ಎಂಐ ಎಮಿರೇಟ್ಸ್ ಆಟಗಾರರಾಗಿದ್ದಾರೆ. ಮಾತ್ರವಲ್ಲದೇ ನಾರ್ಥನ್ ಸೂಪರ್ ಚಾರ್ಜರ್ಸ್, ಟ್ರಿಂಬಾಗೋ ನೈಟ್ ರೈಡರ್ಸ್, ಟ್ರನಿಡಾಡ್ ಆ್ಯಂಡ್ ಟೊಬಾಗೊ ಸೇರಿದಂತೆ ಹತ್ತಾರು ತಂಡಗಳನ್ನ ಪ್ರತಿನಿಧಿಸಿದ್ದಾರೆ.