Home ಅಪರಾಧ ಅಂಬೇಡ್ಕರ್ ಪುತ್ಥಳಿಗೆ ಕಿಡಿಗೇಡಿಗಳಿಂದ ಹಾನಿ

ಅಂಬೇಡ್ಕರ್ ಪುತ್ಥಳಿಗೆ ಕಿಡಿಗೇಡಿಗಳಿಂದ ಹಾನಿ

ರಾಯಚೂರು; ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿ ಗೆ ಕಿಡಿಗೇಡಿ ಕಲ್ಲು ಎಸೆದ ಪರಿಣಾಮ ಕನ್ನಡಕ ಒಡೆದು ಹೋಗಿರುವ ಘಟನೆ ಸಿರವಾರ ತಾಲ್ಲೂಕಿನ ಹರವಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.
ಘಟನೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹಿರಿಯ ಪೊಲೀಸ ಅಧಿಕಾರಿಗಳು ಭೇಟಿ ನೀಡಿದ್ದಾರೆ. ದುಷ್ಕರ್ಮಿಗಳ ಪತ್ತೆಗಾಗಿ ಪೊಲೀಸರು ಜಾಲ ಬಿಸಲಾಗಿದೆ ಎಂದು ಪೊಲೀಸ ಮೂಲಗಳು ತಿಳಿಸಿವೆ. ಘಟನೆ ಖಂಡಿಸಿ ವಿವಿಧ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ.

Exit mobile version