Home Advertisement
Home ಅಪರಾಧ ಅಪಘಾತ: ಇಬ್ಬರು ಸಾವು

ಅಪಘಾತ: ಇಬ್ಬರು ಸಾವು

0
100

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಮಹಿಳೆ ಗಂಭೀರ ಗಾಯಗೊಂಡ ಘಟನೆ ಚಿಕ್ಕಮಗಳೂರು ನಗರದ ಹೊರ ವಲಯದ ಕಣಿವೆ ಕ್ರಾಸ್ ಬಳಿ ನಡೆದಿದೆ.
ಚಿಕ್ಕಮಗಳೂರಿನ ವಿಜಯಪುರ ಬಡಾವಣೆ ನಿವಾಸಿಗಳಾದ ನಿರಂಜನ್(42), ಚೆನ್ನಮ್ಮ(67) ಮೃತಪಟ್ಟವರೆಂದು ಗುರುತಿಸಲಾಗಿದೆ. ನಿರಂಜನ್ ಖಾಸಗಿ ಆಸ್ಪತ್ರೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಚಿಕ್ಕಮಗಳೂರಿನಿಂದ ಕಡೂರಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಮಹಿಳೆ ರತ್ನಮ್ಮ ಅವರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.