ಮೈಸೂರು: ಮೈಸೂರು ದಸರಾ ವಸ್ತುಪ್ರದರ್ಶನದ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.ಕಚೇರಿಗೆ ಸೇರಿದ ಪೀಠೋಪಕರಣಗಳು ಬೆಂಕಿಗೆ ಆಹುತಿಯಾಗಿದೆ.
ಕಚೇರಿ ಪಕ್ಕದಲ್ಲಿರುವ ಮಹಿಳಾ ಮತ್ತು ಕಲ್ಯಾಣ ಇಲಾಖೆಗೆ ಸೇರಿದ ಮಳಿಗೆಗೂ ಬೆಂಕಿ ಕೆನ್ನಾಲಿಗೆ ಚಾಚಿದೆ.ಮಾಹಿತಿ ಅರಿತ ಅಗ್ನಿ ಶಾಮಕ ಸುಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.ಮುಂಜಾನೆ ವೇಳೆ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.ವಸ್ತುಪ್ರದರ್ಶನದ ಅಧಿಕಾರಿಗಳಿಂದ ನಜರಬಾದಪೊಲೀಸರು ಹಾಗೂ ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ.






















