ಆಸ್ತಿ ಖರೀದಿಯಲ್ಲಿ ಅಕ್ರಮ ಎಸೆಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಮಾಜಿ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್ ವಿರುದ್ಧ ನ್ಯಾಯಾಲಯ ಬಂಧನ ವಾರಂಟ್ ಜಾರಿ ಮಾಡಿದೆ.
ಪಂಜಾಬ್ ವಿಜಿಲೆನ್ಸ್ ಬ್ಯೂರೋ ಬಟಿಂಡಾದಲ್ಲಿ ಆಸ್ತಿ ಖರೀದಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಮಾಜಿ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್ ಮತ್ತು ಇತರ ಐವರ ವಿರುದ್ಧ ಪ್ರಕರಣ ದಾಖಲಿಸಿತ್ತು.























