Home ಅಪರಾಧ ಮುರುಘಾಶ್ರೀಗೆ 14ದಿನ ನ್ಯಾಯಾಂಗ ಬಂಧನ

ಮುರುಘಾಶ್ರೀಗೆ 14ದಿನ ನ್ಯಾಯಾಂಗ ಬಂಧನ

0
207

ಚಿತ್ರದುರ್ಗದ ಮುರುಘಾ ಶರಣರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಫೋಕ್ಸೋ ಕಾಯ್ದೆಯಡಿ ಪೊಲೀಸರು ನಿನ್ನೆ ಗುರುವಾರ ರಾತ್ರಿ ಅವರನ್ನು ವಶಕ್ಕೆ ಪಡೆದಿದ್ದರು.
ವೈದ್ಯಕೀಯ ಪರೀಕ್ಷೆಯ ಬಳಿಕ ರಾತ್ರಿ ಎರಡು ಗಂಟೆಯ ಸುಮಾರಿಗೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, 1ನೇ ಹೆಚ್ಚುವರಿ ನ್ಯಾಯಾಧೀಶರಾದ ಕೋಮಲ ಅವರು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ. ಬಳಿಕ ಅವರನ್ನು ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಒಪ್ಪಿಸಲಾಗಿದೆ.