Home ಅಪರಾಧ 14 ರ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ

14 ರ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ

0
108
rape

ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಕೊರಳ್ಳಿ ಗ್ರಾಮದಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರವರಸಗಿ ಕೊಲೆಗೈದಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.
ಅಫಜಲಪುರ ತಾಲ್ಲೂಕಿನ ಗ್ರಾಮವೊಂದರ ನಿವಾಸಿಯಾಗಿದ್ದು, ಈಕೆ ಮೇಲೆ ಅತ್ಯಾಚಾರವೆಸಗಿ ಕೊಲೆಗೀಡಾದ ಬಾಲಕಿ ಎಂದು ಗುರುತಿಸಲಾಗಿದೆ. ಕೊರಳ್ಳಿ ಗ್ರಾಮಕ್ಕೆ ವಿದ್ಯಾಭ್ಯಾಸ ಕ್ಕೆಂದು ಸಂಬಂಧಿಕರ ಮನೆಗೆ ಬಂದು ಕಲಿಯುತ್ತಿದ್ದಳು. ಬಹಿರ್ದೆಸೆಗೆಂದು ಹೋದಾಗ ಕಾಮುಕರು ಈ ಕೃತ್ಯವೆಸಗಿದ್ದಾರೆ. ಕಬ್ಬಿನ ತೋಟದಲ್ಲಿ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಎಸ್‌ಪಿ ಇಶಾ ಪಂತ ಹಾಗೂ ಹಿರಿಯ ಪೊಲೀಸರು ಭೇಟಿ ನೀಡಿ ಕಾಮುಕರ ಬಂಧನಕ್ಕೆ ಬಲೆ ಬೀಸಿದ್ದಾರೆ. ಈ ಬಗ್ಗೆ ಆಳಂದ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಾಗಿದೆ.