ಅಪಹರಣ ಪ್ರಕರಣ: ರೇವಣ್ಣ ಮೂರು ದಿನಗಳ ಕಾಲ ಎಸ್ಐಟಿ ವಶಕ್ಕೆ

Advertisement

ಬೆಂಗಳೂರು: ಶಾಸಕ ಎಚ್.ಡಿ. ರೇವಣ್ಣ ಅವರನ್ನು ಬೆಂಗಳೂರಿನ ಕೋರಮಂಗಲದಲ್ಲಿರುವ ನ್ಯಾಯಾಧೀಶ ರವೀಂದ್ರ ಕಟ್ಟಿಮನಿ ಅವರ ಎದುರು ಭಾನುವಾರ ಹಾಜರುಪಡಿಸಲಾಯಿತು.
ವಿಚಾರಣೆ ವೇಳೆ ಐದು ದಿನಗಳ ಕಾಲ ರೇವಣ್ಣ ಅವರನ್ನು ವಶಕ್ಕೆ ನೀಡಬೇಕೆಂದು ಕೋರಿ ರಿಮ್ಯಾಂಡ್‌ ಅರ್ಜಿ ಸಲ್ಲಿಸಿದ ಎಸ್‌ಐಟಿ “ಇದೊಂದು ಗಂಭೀರ ಪ್ರಕರಣ. ರೇವಣ್ಣ ಅವರು ಮಾಜಿ ಸಚಿವರಾಗಿದ್ದು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ವಿಶೇಷ ತನಿಖಾ ತಂಡದ ಅಧಿಕಾರಿಗಳ ಪರ ವಕೀಲ ಕೋರಿದರು. ಮನವಿ ಪುರಸ್ಕರಿಸಿದ ನ್ಯಾಯಾಧೀಶರು, ರೇವಣ್ಣ ಅವರನ್ನು ಮೇ 8ರವರೆಗೆ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ.