ಆರೋಗ್ಯ ತಪಾಸಣೆ ಹೆಸರಲ್ಲಿ 10 ಕೋಟಿ ರೂಪಾಯಿ ಅವ್ಯವಹಾರ

Advertisement

ಕಾರ್ಮಿಕ ಸಚಿವ ಸಂತೋಷ ಲಾಡ್‌ ಅವರ ರಾಜೀನಾಮೆಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್ ಆಗ್ರಹ

ಬೆಂಗಳೂರು: ಆರೋಗ್ಯ ತಪಾಸಣೆ ಹೆಸರಿನಲ್ಲಿ 10 ಕೋಟಿ ರೂಪಾಯಿ ಅವ್ಯವಹಾರ ನಡೆದಿರುವ ಹಗರಣ ಬೆಳಕಿಗೆ ಬಂದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್ ಹೇಳಿದ್ದಾರೆ
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಿನಲ್ಲಿ 10 ಕೋಟಿ ರೂಪಾಯಿ ಅವ್ಯವಹಾರ ನಡೆದಿರುವ ಹಗರಣ ಬೆಳಕಿಗೆ ಬಂದಿದ್ದು, ಸಿಎಂ ಸಿದ್ದರಾಮಯ್ಯ ಸರ್ಕಾರದ ಮತ್ತೊಂದು ಭ್ರಷ್ಟಾಚಾರ ಬಯಲಾಗಿದೆ.
ಕಾರ್ಮಿಕರ ಶ್ರಮದಿಂದಲೇ ಸಂಗ್ರಹವಾದ 8,200 ಕೋಟಿ ರೂಪಾಯಿ ಕಲ್ಯಾಣ ನಿಧಿ ಇದ್ದರೂ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಬೇಕಾದ ಶೈಕ್ಷಣಿಕ ಸಹಾಯ ಧನ ನೀಡದೆ ಸತಾಯಿಸುತ್ತಿರುವ ಕಾರ್ಮಿಕ ಇಲಾಖೆಗೆ ಇತ್ತೀಚೆಗಷ್ಟೆ ಮಾನ್ಯ ಹೈಕೋರ್ಟ್ ಛೀಮಾರಿ ಹಾಕಿತ್ತು.
ಇದರ ಬೆನ್ನಲ್ಲೇ ಈಗ ಕಾರ್ಮಿಕ ಇಲಾಖೆಯಲ್ಲಿ ಮತ್ತೊಂದು ಹಗರಣ ಬೆಳಕಿಗೆ ಬಂದಿರುವುದು ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಬಗ್ಗೆ ಹೇಸಿಗೆ ಹುಟ್ಟಿಸುತ್ತಿದ್ದು, ಕಾರ್ಮಿಕ ಸಚಿವ ಸಂತೋಷ ಲಾಡ್‌ ಅವರ ರಾಜೀನಾಮೆ ಪಡೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಲ್ಲಿ ಅಗ್ರಹಿಸುತ್ತೇನೆ ಎಂದಿದ್ದಾರೆ.