ನವದೆಹಲಿ: ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಗಾಗಿ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.
ಕರ್ನಾಟಕದ ಮೂವರು ಆಟಗಾರರು ಕೆಎಲ್ ರಾಹುಲ್, ಪ್ರಸಿದ್ಧ್ ಕೃಷ್ಣ, ಕರುಣ್ ನಾಯರ್ ಸೇರಿದಂತೆ 18 ಸದಸ್ಯರ ಈ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಶುಭ್ಮನ್ ಗಿಲ್ ನಾಯಕನಾಗಿ, ಉಪನಾಯಕನಾಗಿ ರಿಷಭ್ ಪಂತ್ ತಂಡ ನಡೆಸಲಿದ್ದಾರೆ.
ಟೆಸ್ಟ್ ಸರಣಿಯು ಜೂನ್ 20 ರಿಂದ ಆರಂಭವಾಗಲಿದ್ದು ಸರಣಿಯ ಮೊದಲ ಪಂದ್ಯ ಲೀಡ್ಸ್ನಲ್ಲಿ ನಡದರೆ, ಎರಡನೇ ಪಂದ್ಯವು ಬರ್ಮಿಂಗ್ಹ್ಯಾಮ್ನಲ್ಲಿ ನಡೆಯಲಿದೆ. ಇನ್ನು ಮೂರನೇ ಪಂದ್ಯಕ್ಕೆ ಲಾರ್ಡ್ಸ್ ಮೈದಾನವು ಆತಿಥ್ಯವಹಿಸಲಿದೆ. ಹಾಗೆಯೇ 4ನೇ ಮತ್ತು 5ನೇ ಪಂದ್ಯಗಳು ಮ್ಯಾಂಚೆಸ್ಟರ್ ಹಾಗೂ ಲಂಡನ್ನಲ್ಲಿ ನಡೆಯಲಿದೆ.
ಭಾರತ ಟೆಸ್ಟ್ ತಂಡ: ಶುಭ್ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್.