ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ ಬರೋಬ್ಬರಿ 97 ರನ್ ಗಳ ಭರ್ಜರಿ ಜಯಗಳಿಸಿದೆ.
ಇಂಗ್ಲೆಂಡ್ ತಂಡ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು, ಮೊದಲು ಬ್ಯಾಟ್ ಮಾಡಿದ ಭಾರತ ತಂಡ 5 ವಿಕೆಟ್ ನಷ್ಟಕ್ಕೆ ಇಂಗ್ಲೆಂಡ ತಂಡಕ್ಕೆ 210 ರನ್ ಗಳ ಸವಾಲಿನ ಗುರಿ ನೀಡಿತು, ಭಾರತ ತಂಡ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್‌ಗಳಿಗೆ 210 ರನ್ ಗಳಿಸಿ ಇಂಗ್ಲೆಂಡ್ ವಿರುದ್ಧ ಎರಡನೇ ಅತ್ಯಧಿಕ ಮತ್ತು ಅತ್ಯಧಿಕ ಟಿ20 ಸ್ಕೋರ್ ದಾಖಲಿಸಿತು. ಸ್ಮೃತಿ ಮಂಧಾನ ಅವರ ಶತಕ ಮತ್ತು ಶ್ರೀ ಚರಣಿ ಅವರ 4 ವಿಕೆಟ್‌ಗಳು ಭಾರತದ ಗೆಲುವಿಗೆ ಪ್ರಮುಖ ಕಾರಣವಾದವು, ಭಾರತ ನೀಡಿದ 210 ರನ್ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ 113 ರನ್ಗಳಿಗೆ ಆಲೌಟ್ ಆಯಿತು. ಈ ಜಯದೊಂದಿಗೆ ಐದು ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ.