ಯಾದಗಿರಿ: ಕಾನೂನು ಸುವ್ಯವಸ್ಥೆ ಕಾಪಾಡಿದ ಪ್ರಾಮಾಣಿಕ ದಿಟ್ಟ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಅವರನ್ನು ಯಾದಗಿರಿ ಜಿಲ್ಲೆಯಲ್ಲಿ ಮುಂದುವರಿಸಬೇಕು ಎಂದು ಮಾಜಿ ಸಚಿವ ನರಸಿಂಹನಾಯಕ(ರಾಜುಗೌಡ) ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
ಜಿಲ್ಲೆಯಲ್ಲಿ ಮಟ್ಕಾ, ಜೂಜಾಟ, ಅಕ್ರಮ ಮರಳುಗಾರಿಕೆ ನಿಯಂತ್ರಿಸಿ ಶಾಂತಿ ಸುವ್ಯವಸ್ಥೆ ಕಾಪಾಡಿದ್ದಾರೆ. ರಾಜಕೀಯ ವ್ಯವಸ್ಥೆಯಿಂದಾಗಿ ದಕ್ಷ ನಿಷ್ಠಾವಂತ ಪೊಲೀಸ್ ಅಧಿಕಾರಿ ಪೃಥ್ವಿಕ್ ಶಂಕರ್ ವರ್ಗಾವಣೆ ಮಾಡಿದ್ದು, ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದೆ. ವೈಯಕ್ತಿಕ ನನಗೂ ಬೇಸರ ತರಿಸಿದೆ ಎಂದು ಅವರು ತಿಳಿಸಿದ್ದಾರೆ.
ಈ ಭಾಗವು ಅತ್ಯಂತ ಹಿಂದುಳಿದೆ. ಅಹಿತಕರ, ಅಕ್ರಮ ಚಟುವಟಿಕೆಗಳ ಮಟ್ಟ ಹಾಕಿ ಕಾನೂನು ಸುವ್ಯವಸ್ಥೆ ಕಲ್ಪಿಸಿದ ನಿಷ್ಠಾವಂತ ಅಧಿಕಾರಿಯನ್ನು ಜನರು ಹೋರಾಟ ಮಾಡುವ ಮುಂಚೆಯೇ ವರ್ಗಾವಣೆ ಹಿಂಪಡೆದು ಜಿಲ್ಲೆಯಲ್ಲಿ ಕರ್ತವ್ಯ ನಿಭಾಯಿಸಲು ಅವಕಾಶ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.