ನವದೆಹಲಿ: ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ 2026 ರ ಟಿ20 ವಿಶ್ವಕಪ್‌ಗೆ ತಯಾರಿ ನಡೆಸುವ ಉದ್ದೇಶದಿಂದ ಮ್ಯಾಕ್ಸ್‌ವೆಲ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಪ್ರಕಟಿಸಿದೆ. 2012 ರಿಂದ 2025 ರವರೆಗಿನ ವೃತ್ತಿಜೀವನದಲ್ಲಿ, ಮ್ಯಾಕ್ಸ್‌ವೆಲ್ 149 ಏಕದಿನ ಪಂದ್ಯಗಳಲ್ಲಿ ಆಡಿದ್ದು, 3990 ರನ್‌ಗಳನ್ನು ಗಳಿಸಿದ್ದಾರೆ ಮತ್ತು 77 ವಿಕೆಟ್‌ಗಳನ್ನು ಪಡೆದಿದ್ದಾರೆ. ಸ್ಫೋಟಕ ಬ್ಯಾಟ್ಸ್‌ಮನ್ ಆಗಿರುವ ಮ್ಯಾಕ್ಸ್‌ವೆಲ್ 33.81 ರ ಸರಾಸರಿಯಲ್ಲಿ ರನ್ ಗಳಿಸಿದ್ದಾರೆ. 126.70 ರ ಸ್ಟ್ರೈಕ್ ರೇಟ್ ಹೊಂದಿದ್ದಾರೆ. 2023 ರ ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ ಅಜೇಯ 201 ರನ್ ಗಳಿಸಿದ್ದು ಮ್ಯಾಕ್ಸ್ವೆಲ್ ಏಕದಿನ ಪಂದ್ಯಗಳಲ್ಲಿ ಆಡಿದ ಶ್ರೇಷ್ಠ ಇನ್ನಿಂಗ್ಸ್ ಎಂದು ಪರಿಗಣಿಸಲಾಗಿದೆ. ಏಕದಿನ ಕ್ರಿಕೆಟ್ ನಲ್ಲಿ 4 ಶತಕಗಳು ಮತ್ತು 23 ಅರ್ಧಶತಕಗಳನ್ನು ಅವರು ಗಳಿಸಿದ್ದಾರೆ. ಆಫ್‌ಸ್ಪಿನ್ನರ್ ಆಗಿದ್ದ ಅವರು ತಮ್ಮ ವೃತ್ತಿಜೀವನದಲ್ಲಿ ನಾಲ್ಕು ಬಾರಿ ನಾಲ್ಕು ವಿಕೆಟ್ ಪಡೆದಿದ್ದರು. ಏಕದಿನ ಕ್ರಿಕೆಟ್ ನಲ್ಲಿ 91 ಕ್ಯಾಚ್‌ಗಳನ್ನು ಪಡೆದಿದ್ದಾರೆ.