ಕಡಲ ಕಿನಾರೆಯಲ್ಲಿ ತಾಮ್ರದ ಕಳಸ ಪತ್ತೆ

ಕುಂದಾಪುರ: ಬೈಂದೂರು ತಾಲೂಕಿನ ಪಡುವರಿ ಗ್ರಾಮದ ಸೋಮೇಶ್ವರ ಸಮುದ್ರ ತೀರದಲ್ಲಿ ದೇವಸ್ಥಾನದ ಗೋಪುರಕ್ಕೆ ಅಳವಡಿಸುವ ಸುಮಾರು 3 ಕೆಜಿ ತೂಕದ ತಾಮ್ರದ ಕಳಸ ಪತ್ತೆಯಾಗಿದೆ.
ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯ ಇನ್ಸಪೆಕ್ಟರ್ ವಸಂತರಾಮ ಆಚಾರ್, ಉಪನಿರೀಕ್ಷಕ ಸುಬ್ರಹ್ಮಣ್ಯ ಎಚ್., ಸಿಬ್ಬಂದಿಗಳಾದ ಯುವರಾಜ್, ರಾಘವೇಂದ್ರ ದೇವಾಡಿಗ ಹಾಗೂ ಗೃಹರಕ್ಷಕ ದಳದ ನಾಗೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿ ಸಮುದ್ರ ತೀರದಲ್ಲಿ ಪತ್ತೆಯಾದ ತಾಮ್ರದ ಕಳಸವನ್ನು ವಶಪಡಿಸಿಕೊಂಡಿದ್ದಾರೆ. ಇದರ ವಾರಸುದಾರರು ಇದ್ದಲ್ಲಿ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯನ್ನು ಅಥವಾ ಮೊಬೈಲ್ ಸಂಖ್ಯೆ 9480800580 ಸಂಪರ್ಕಿಸುವಂತೆ ಕೋರಲಾಗಿದೆ.