ಕಲಾಪ ಬಹಿಷ್ಕರಿಸಿದ ವಿಪಕ್ಷಗಳು

Advertisement

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿ ವಂದನಾ ಭಾಷಣಕ್ಕೆ ನಿರ್ಣಯ ಸಲ್ಲಿಸಿ ಮಾತನಾಡುವ ಸಂಧರ್ಭದಲ್ಲಿ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ರಾಜ್ಯಸಭೆಯ ಕಲಾಪವನ್ನು ಬಹಿಷ್ಕರಿಸಿ ಹೊರನಡೆದರು.
ಮೋದಿ ಅವರ ಭಾಷಣದ ನಡುವೆ ಪ್ರತಿ ಪಕ್ಷಗಳ ಸದಸ್ಯರು, ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡುವಂತೆ ಒತ್ತಾಯಿಸಿದರು. ಮೋದಿ ಅವರ ಭಾಷಣದಲ್ಲಿ ಮಧ್ಯಪ್ರವೇಶಿಸಲು ರಾಜ್ಯಸಭೆ ಅಧ್ಯಕ್ಷ ಜಗದೀಪ್ ಧನಕರ್ ಅನುಮತಿ ನಿರಾಕರಿಸಿದರು. ಇದರಿಂದ ಅಸಮಾಧಾನಗೊಂಡ ಖರ್ಗೆ ಅವರ ನೇತೃತ್ವದಲ್ಲಿ ವಿಪಕ್ಷ ಸದಸ್ಯರು ಹೊರನಡೆದರು. ತಮ್ಮ ಮಾತನ್ನು ಮುಂದುವರೆಸಿದ ಪ್ರಧಾನಿ ವಿಪಕ್ಷಗಳಿಗೆ ತಾವು ಕೇಳಿದ ಪ್ರಶ್ನೆಗಳಿಗೆ ಉತ್ತರ ಕೇಳಿಸಿಕೊಳ್ಳುವ ತಾಳ್ಮೆ ಇಲ್ಲ. ಅವರಿಗೆ ಓಡಿ ಹೋಗುವುದು ಮಾತ್ರ ಗೊತ್ತು ಎಂದು ಲೇವಡಿ ಮಾಡಿದ್ದಾರೆ.