ಕಾಂಗ್ರೆಸ್‌ನ ದೊಡ್ಡ ನಾಯಕರು ಹಿಂದುಸ್ತಾನ ಪರ ಆದರೆ…

ರಾಷ್ಟ್ರ ದ್ರೋಹಿ ಹೇಳಿಕೆ ನೀಡುವವರನ್ನು ಗುಂಡಿಟ್ಟು ಕೊಲ್ಲಿ ಎಂದ ಈಶ್ವರಪ್ಪ

ವಿಜಯಪುರ: ಕಾಂಗ್ರೆಸ್‌ನ ದೊಡ್ಡ ದೊಡ್ಡ ನಾಯಕರು ಹಿಂದುಸ್ತಾನ ಪರವಾಗಿ ಮಾತನಾಡಿದರೆ ಜೂನಿಯರ್ ಕಾಂಗ್ರೆಸ್ ನಾಯಕರು ಮಾತ್ರ ಟೀಕೆ ಮಾಡುತ್ತಿದ್ದಾರೆ ಆಪರೇಷನ್ ಸಿಂದೂರದ ಬಗ್ಗೆ ಟೀಕೆ ಮಾಡೋರಿಗೆ ಗುಂಡು ಹೊಡಿಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸೀನಿಯರ್ ಖರ್ಗೆ ವಿಧಿ ಇಲ್ಲದೆ ಅಲ್ಲೊಂದು ಇಲ್ಲೊಂದು ಮಾತನಾಡುತ್ತಾರೆ. ಆದ್ರೆ ಪಾಕಿಸ್ತಾನ ಪರವಾಗಿ ಮಾತನಾಡುವ ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್, ಕೊತ್ತೂರು ಮಂಜುನಾಥ್, ದಿನೇಶ್ ಗುಂಡೂರಾವ್‌ಗೆ ಗುಂಡು ಹೊಡೆಯಬೇಕು. ಇವರಿಗೆಲ್ಲಾ ಗುಂಡು ಹಾಕಿದರೆ ಮಾತ್ರ ಸರಿ ಹೋಗುತ್ತದೆ. ಇವರ ಬಗ್ಗೆ ಕಾಂಗ್ರೆಸ್‌ನವರಿಂದಲೇ ಟೀಕೆ ಕೇಳಿಬರುತ್ತಿದೆ ಎಂದರು.