ಕಾಂಗ್ರೆಸ್ ಪಕ್ಷಕ್ಕೆ ಆದಾಯ ತೆರಿಗೆ ಇಲಾಖೆಯಿಂದ 1700 ಕೋಟಿ ಟ್ಯಾಕ್ಸ್ ನೋಟಿಸ್‌

ಕಾಂಗ್ರೆಸ್‌
Advertisement

ನವದೆಹಲಿ: ಕಾಂಗ್ರೆಸ್ ಪಕ್ಷ 1,700 ಕೋಟಿ ರೂ ತೆರಿಗೆ ಬಾಕಿ ಉಳಿಸಿಕೊಂಡಿದೆ ಎಂದು ಆದಾಯ ತೆರಿಗೆ ಇಲಾಖೆ ನೋಟೀಸ್ ನೀಡಿದೆ.
ಟ್ಯಾಕ್ಸ್ ನೋಟೀಸ್​ಗಳನ್ನು ಪ್ರಶ್ನಿಸಿ ಕಾಂಗ್ರೆಸ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ನಿನ್ನೆ ಗುರುವಾರ ತಿರಸ್ಕರಿಸಿತ್ತು. ಅದರ ಬೆನ್ನಲ್ಲೇ ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಪಕ್ಷಕ್ಕೆ ಹೊಸ ನೋಟೀಸ್ ನೀಡಿದೆ. 2017-18ನೇ ಸಾಲಿನಿಂದ 2020-21ನೇ ಹಣಕಾಸು ಸಾಲಿನಲ್ಲಿ ಕಾಂಗ್ರೆಸ್‌ ತೆರಿಗೆ ರಿಟರ್ನ್ಸ್‌ ವೇಳೆ ವ್ಯತ್ಯಾಸವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿ ಇಲಾಖೆಯು ಕಾಂಗ್ರೆಸ್‌ಗೆ 1,700 ಕೋಟಿ ರೂ. ಡಿಮ್ಯಾಂಡ್‌ ನೋಟಿಸ್‌ ಜಾರಿಗೊಳಿಸಿದೆ.