ಚಿತ್ರದುರ್ಗ: ಕಾರಿನ ಟಯರ್ ಸ್ಪೋಟಗೊಂಡು ಡಿವೈಡರ್‌ಗೆ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.
ತಾಲೂಕಿನ ಕಾತ್ರಾಳ ಗ್ರಾಮದ ಕೆರೆ ಬಳಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಮೂವರು ಸಾವನಪ್ಪಿದ್ದು ಆರು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಮೃತರನ್ನು ತಮಿಳುನಾಡು ಮೂಲದ ಅರ್ಜುನ್ (28), ಸರವಣ್ (30), ಶ್ರೀಧರ್ (30) ಎನ್ನಲಾಗಿದೆ. ಮೃತ ಅರ್ಜುನ್ ತಮಿಳುನಾಡು ಮೂಲದ ಪೊಲೀಸ್ ಪೇದೆಯಾಗಿದ್ದಾರೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.