ಚಿಕ್ಕಬಳ್ಳಾಪುರ: ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿ ಕಾರು ಬಾವಿಗೆ ಬಿದ್ದ ಪರಿಣಾಮ, ರಾಜ್ಯದ ಮೂವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.
ಮೃತರನ್ನು ಚಿಂತಾಮಣಿ ತಾಲೂಕಿನ ಮುತ್ತಕದಲ್ಲಿ ಗ್ರಾಮದ ನಿವಾಸಿ ಲೊಕೇಶ(34), ಚಂದನಹಳ್ಳಿ ಗ್ರಾಮದ ಶಿವಾನಂದ, ಕೋಲಾರ ಜಿಲ್ಲೆಯ ಸುಗಟೂರು ಗ್ರಾಮದ ಚಲಪತಿ ಎಂದು ಗುರುತಿಸಲಾಗಿದ್ದು, ಇನ್ನಿಬ್ಬರು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ವರದಿಯಾಗಿದೆ. ಇವರೆಲ್ಲರೂ ಅಡುಗೆ ಕೆಲಸಕ್ಕಾಗಿ ಹೊಸೂರಿಗೆ ಹೋಗಿ ಹಿಂತಿರುಗುವಾಗ ಘಟನೆ ಸಂಭವಿಸಿದೆ ಎನ್ನಲಾಗಿದೆ.