ಕಾರ್ಯಕರ್ತರ ಕಷ್ಟ, ನೋವು ಕೇಳಲು ರಾಜ್ಯ ಪ್ರವಾಸ

ಯಾದಗಿರಿ : ಜೆಡಿಎಸ್ ಪಕ್ಷದಿಂದ ಸಾಕಷ್ಟು ಜನ ಶಾಸಕರಾಗಿದ್ರು. ಎರಡು ರಾಷ್ಟ್ರೀಯ ಪಕ್ಷಗಳ ಬಹುತೇಕ ಶಾಸಕರು, ಸಚಿವರಾದವರು ಜನತಾದಳದ ಔಟ್ ಪುಟ್ಗಳು ಎಂದು ಜೆಡಿಎಸ್ ಯುವ ಘಟಕ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಶನಿವಾರ ನಗರದ ಹೊರ ವಲಯದಲ್ಲಿನ ಸಪ್ತಪದಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಜನರೊಂದಿಗೆ ಜನತಾದಳ ಜೆಡಿಎಸ್‌ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಮಾತೆತಿದ್ದರೆ ಕಾಂಗ್ರೆಸ್ ಅವರು ಜೆಡಿಎಸ್ ಪಕ್ಷದ ಕಥೆ ಮುಗಿದಿದೆ ಎನ್ನುತ್ತಾರೆ. ಆದರೆ, ನಿಮ್ಮ ಪಕ್ಷ ಎಷ್ಟು ರಾಜ್ಯದಲ್ಲಿ ಅಧಿಕಾರದಲ್ಲಿದೆ ಎಂದು ಪ್ರಶ್ನಿಸಿದರು.
ನನ್ನ ರಾಜ್ಯ ಪ್ರವಾಸದ ಹಿಂದೆ ರಾಜ್ಯಾಧ್ಯಕ್ಷ ಫ್ಲಾನ್ ಇದೆ ಅಂತ ಮಾಧ್ಯಮದಲ್ಲಿ ಚರ್ಚೆ ಆಗ್ತಿದೆ. ಇನ್ನು ಚುನಾವಣೆ ಮೂರು ವರ್ಷವಿದೆ. ನಾನು ಕಾರ್ಯಕರ್ತನಾಗಿ ರಾಜ್ಯದ ಉದ್ದಗಲ್ಲಕ್ಕೂ ಕಾರ್ಯಕರ್ತರ ಜೊತೆ ಬಾಂಧವ್ಯ, ಸಂಪರ್ಕ, ಸಂಬಂಧ ಇಟ್ಟುಕೊಳ್ಳಲು ಪ್ರವಾಸ ಮಾಡ್ತಿದ್ದೇನೆ ಎಂದು ತಿಳಿಸಿದರು.
ಜೆಡಿಎಸ್ ಶಾಸಕರಿಗೆ ಬರುವ ಆಫರ್‌ಗಳನ್ನು ಶಾಸಕರು ನಮ್ಮ ಗಮನಕ್ಕೆ ತರುತ್ತಾರೆ, ಕಾಂಗ್ರೆಸ್ ಶಾಸಕರನ್ನು ಹಾಗೂ ಕಾಂಗ್ರೆಸ್ ಸರಕಾರ ಉಳಿಸಿಕೊಳ್ಳಬೇಕಿದೆ. ಕಾಂಗ್ರೆಸ್ ಸರಕಾರದ ಕುರ್ಚಿ ಮೊದಲು ಭದ್ರಪಡಿಸಿಕೊಳ್ಳಬೇಕಿದೆ. ಕಾಂಗ್ರೆಸ್ ಶಾಸಕರೇ ಕಾಂಗ್ರೆಸ್ ಬಿಟ್ಟು ಹೋಗುವ ವಾತಾವರಣ ಸೃಷ್ಟಿಯಾಗಿದೆ ಎಂದು ನಿಖಿಲ್ ಕುಮಾರಸ್ವಾಮಿ ವ್ಯಂಗ್ಯವಾಡಿದರು.
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದೆ. ಜೆಡಿಎಸ್ ಕಥೆ ಮುಗಿದುಮುಗಿದೋಯ್ತು ಅಂತಾರೆ. ಆದರೆ ನಿಮ್ಮ ಪಕ್ಷ ಎಷ್ಟು ರಾಜ್ಯದಲ್ಲಿ ಅಧಿಕಾರದಲ್ಲಿದೆ ಎಂದು ಅವರು ಪ್ರಶ್ನಿಸಿದರು. ನೂರು ವರ್ಷ ಇತಿಹಾಸ ಇರುವ ಕಾಂಗ್ರೆಸ್ ಮೂರು ರಾಜ್ಯಕ್ಕೆ ಸೀಮಿತವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಕುಮಾರಣ್ಣನಿಗೆ ನಾನೊಬ್ಬನೇ ಮಗ ನಿಜ. ಆದರೆ ಶರಣ್ ಗೌಡ ಕಂದಕೂರ ಮಗನ ಸಮಾನ. ಬೇರೆ ಬೇರೆ ಪಕ್ಷದಲ್ಲಿ ಅಧಿಕಾರ ಅನುಭವಿಸುತ್ತಿರುವ 50ಕ್ಕೂ ಹೆಚ್ಚು ಶಾಸಕರು ಸಚಿವರು ಜೆಡಿಎಸ್ ಪಕ್ಷದ ಪಳೆಯುಳಿಕೆಗಳೆ. ನಮ್ಮ ಪಕ್ಷದಲ್ಲಿ ಅಧಿಕಾರ ಅನುಭವಿಸಿ. ಈಗ ಬೇರೆ ಪಕ್ಷಕ್ಕೆ ಹೋಗಿ ನಮ್ಮ ಪಕ್ಷದ ಬಗ್ಗೆನೇ ಮಾತನಾಡುತ್ತಿದ್ದಾರೆ ಎಂದು ಹೇಳಿದರು.
ಮಾಜಿ ಪ್ರಧಾನಿಗಳು ದೇವೇಗೌಡರ ಜೊತೆ ಹೆಗಲಿಗೆ ಹೆಗಲು ಕೊಟ್ಟು ಎಷ್ಟೇ ತೊಂದರೆ, ಸಂಕಷ್ಟಗಳು ಎದುರಾದರು ಪಕ್ಷದ ಜೊತೆ ಗಟ್ಟಿಯಾಗಿ ನಿಂತಿದ್ದು ಕಂದಕೂರ ಕುಟುಂಬ. ದಿ. ಸದಾಶಿವ ರೆಡ್ಡಿ ಕಂದಕೂರು, ದಿ. ನಾಗನಗೌಡ ಕಂದಕೂರು ಅವರ ಪಕ್ಷ ನಿಷ್ಠೆ ನಮ್ಮೆಲ್ಲರಿಗೂ ಪ್ರೇರಣೆಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ವೆಂಟರಾವ್ ನಾಡಗೌಡ ಅವರು, ಶಾಸಕರಾದ ಶರಣಗೌಡ್ ಕಂದಕೂರ ಅವರು, ದೊಡ್ಡಪ್ಪಗೌಡ ಪಾಟೀಲ್ ನರಿಬೋಳ್,ರಾಜಾ ವೆಂಕಟಪ್ಪ ನಾಯಕ್, ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ರಶ್ಮಿ ರಾಮೇಗೌಡ ಅವರು, ಯಾದಗಿರಿ ಜಿಲ್ಲಾಧ್ಯಕ್ಷರಾದ ಶ್ರೀ ಸುಭಾಷ್ ಕಟಕಟಿ, ಬಾಲರಾಜ್ ಗುತ್ತೇದಾರ್ ಸೇರಿದಂತೆ ಪ್ರಮುಖರು ಇದರು.