ದಾವಣಗೆರೆ: ಆರ್‌ಸಿಬಿ ಸಂಭ್ರಮಾಚರಣೆಯಲ್ಲಿ ನಡೆದ ಸಾವಿನ ಘಟನೆಗೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ದೂರುತ್ತಿರುವ ಬಿಜೆಪಿಯೇ ಅಂದು ಮೆರವಣಿಗೆಗೆ ಅವಕಾಶ ನೀಡಬೇಕೆಂದು ಆಗ್ರಹಿಸಿತ್ತು. ಕಲ್ತುಳಿತ ಪ್ರಕರಣದಲ್ಲಿ ಬಿಜೆಪಿಯವರು ಕೂಡ ಹೊಣೆಗಾರರಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಆಪಾದಿಸಿದರು.
ಮಾಯಕೊಂಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರೀಕ್ಷೆಗೂ ಮೀರಿದ ಜನರು ಸಂಭ್ರಮಾಚರಣೆ ವೇಳೆ ಸೇರಿದ್ದರಿಂದ ಈ ಅವಘಡ ಸಂಭವಿಸಿದೆ. ಸರಕಾರ ಮೆರವಣಿಗೆಗೆ ಅವಕಾಶ ನೀಡದೆ ಇರುವ ಸಂದರ್ಭದಲ್ಲಿ ಬಿಜೆಪಿಯವರೇ ಮೊದಲು ಟ್ವಿಟ್ ಮಾಡಿ ಮೆರವಣಿಗೆಗೆ ಅವಕಾಶ ಕೊಡುವಂತೆ ಆಗ್ರಹಿಸಿದ್ದರು. ಈಗ ಅವರೇ ಉಲ್ಟಾ ಆಗಿದ್ದಾರೆ ತನಿಖೆ ನಂತರ ಗೊತ್ತಾಗಲಿದೆ ಎಂದರು.
ಕಾಲ್ತುಳಿತದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆಗೆ ವಹಿಸಿದ್ದು, ಘಟನೆಯಲ್ಲಿ ಯಾರ ತಪ್ಪಿದೆ ಎನ್ನುವುದು ತನಿಖೆ ನಂತರ ಗೊತ್ತಾಗಲಿದೆ. ಆನಂತರ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.