ಕಾಲ್ತುಳಿತ ಪ್ರಕರಣದ ಗಮನ ಬೇರೆಡೆ ಸೆಳೆಯಲು ಜಾತಿ ಜನಗಣತಿ

ಬೆಂಗಳೂರು: ಕಾಲ್ತುಳಿತ ಪ್ರಕರಣದ ಗಮನ ಬೇರೆಡೆ ಸೆಳೆಯಲು ಜಾತಿ ಜನಗಣತಿಗೆ ಸರ್ಕಾರ ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.
ನಗರದಲ್ಲಿಂದು ಸಉದ್ದಿಗಾರರೊಂದಿಗೆ ಮಾತನಾಡಿದ ಅವರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣವನ್ನು ಬೇರೆಡೆಗೆ ಸೆಳೆಯಲು ರಾಜ್ಯ ಸರ್ಕಾರ ಹೊಸದಾಗಿ ಜಾತಿ ಗಣತಿ ನಡೆಸಲು ಮುಂದಾಗಿದೆ, ಈ ಹಿಂದೆ ಡಾ. ಕಾಂತರಾಜು ಆಯೋಗ ಸಲ್ಲಿಸಿದ್ದ ವರದಿಯನ್ನು ಅನುಷ್ಠಾನಕ್ಕೆ ತರುವಂತೆ ಬಿಜೆಪಿ ಸಾಕಷ್ಟು ಬಾರಿ ಒತ್ತಾಯಿಸಿತ್ತು ಹಾಗೂ ಹೊಸದಾಗಿ ವರದಿ ತಯಾರಿಸುವ ಅಗತ್ಯತೆ ಬಗ್ಗೆ ಹಲವು ಬಾರಿ ಬೇಡಿಕೆ ಇಟ್ಟಿದ್ದರೂ ರಾಜ್ಯ ಸರ್ಕಾರ ಮಹತ್ವ ನೀಡಿರಲಿಲ್ಲ. ಆದರೆ ಈಗ ಕಾಲ್ತುಳಿತ ಪ್ರಕರಣದ ಗಮನ ಬೇರೆಡೆ ಸೆಳೆಯಲು ಜಾತಿ ಜನಗಣತಿಗೆ ಮುಂದಾಗಿದೆ. ಜತೆಗೆ ಕೇಂದ್ರವು ಸಹ ಜಾತಿ ಜನಗಣತಿ ನಡೆಸಲು ಮುಂದಾಗಿರುವುದರಿಂದ ಈ ವಿಚಾರದಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸುತ್ತಿದೆ ಎಂದರು.