ಕಾವೇರಿ ವಿವಾದ: ರೈಲು ತಡೆಯಲು ಮುಂದಾದ ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ

Advertisement

ಯಾದಗಿರಿ : ಕಾವೇರಿ ನೀರಿನಲ್ಲಿ ರಾಜ್ಯಕ್ಕೆ ಆದ ಅನ್ಯಾಯ ವಿರೋಧಿಸಿ‌, ಕರ್ನಾಟಕ ಬಂದ್‌ ಬೆಂಬಲಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕರವೇ ಉತ್ತರ ಕರ್ನಾಟಕ ಅಧ್ಯಕ್ಷ ಶರಣು ಗದ್ದುಗೆ ನೇತೃತ್ವದಲ್ಲಿ ರೈಲು ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.
ರೈಲ್ವೆ ನಿಲ್ದಾಣದ ಗೇಟ್ ಬಳಿ ಜಮಾಯಿಸಿದ ಕರವೇ ಕಾರ್ಯಕರ್ತರು ಬೆಳಗಿನ ನಾಗರ ಕೊಯಿಲ್ ಟ್ರೈನ್ ತಡೆಯಲು ಮುಂದಾದರು. ಈ ಸಂದರ್ಭದಲ್ಲಿ ಪೊಲೀಸ್ ತಡೆದರು ಕಾವೇರಿ ನೀರು ಬಿಡದಂತೆ ಘೋಷಣೆ ಕೂಗಿ ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ನಂತರ ಶರಣು ಗದ್ದುಗೆ ಸೇರಿದಂತೆ 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.