ವಿಜಯಪುರ : ವಿಜಯಪುರ ಜಿಲ್ಲೆಯ ತಿಕೋಟಾ ಮೂಲದ ಯೋಧ ರಾಜು ಕರ್ಜಗಿ (35) ಮೃತಪಟ್ಟಿದ್ದಾರೆ.
ಭಾರತೀಯ ಸೇನೆಯಲ್ಲಿ ಹವಾಲ್ದಾರ್ ಹುದ್ದೆಯಲ್ಲಿದ್ದ ವಿಜಯಪುರ ಜಿಲ್ಲೆಯ ಯೋಧ ಸಾವಿಗೀಡಾಗಿರುವ ಕುರಿತು ಸೇನೆ ಮಾಹಿತಿ ನೀಡಿದೆ. ಭಾರತೀಯ ರೈಫಲ್ಸ್ನ 51 ಯುನಿಟ್ನ ಮಹಾರ್ ರೆಜಿಮೆಂಟ್ 13 ರಲ್ಲಿ ಹವಾಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಕರ್ತವ್ಯ ನಿರತ ಯೋಧ ಜಮ್ಮು ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿರುವ ವೇಳೆ ಮೃತಪಟ್ಟಿದ್ದಾರೆ. ಯೋಧ ಮೃತಪಟ್ಟಿರುವ ಬಗ್ಗೆ ಸೇನಾಧಿಕಾರಿಗಳು ಹಾಗೂ ಜಿಲ್ಲಾಡಳಿತ ಕುಟುಂಬದವರಿಗೆ ಮಾಹಿತಿ ನೀಡಿದೆ. ಮತ್ತೊಂದೆಡೆ ಯೋಧನ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಂಗಳವಾರ ರಾತ್ರಿ ಹೈದ್ರಾಬಾದ್ ಮಾರ್ಗವಾಗಿ ಮೃತದೇಹವನ್ನು ವಿಜಯಪುರ ಜಿಲ್ಲೆ ತಿಕೋಟಕ್ಕೆ ತರಲಾಗುತ್ತದೆ. ಬುಧವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ರಾಜು ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.