ಕೆಜಿ ಟೊಮೆಟೊಗೆ 60: ಪಡಿತರ ಅಂಗಡಿಗಳಲ್ಲಿ ಮಾರಾಟ

Advertisement

ಚೆನ್ನೈ: ಗ್ರಾಹಕರಿಗೆ ತಟ್ಟಿರುವ ಬೆಲೆ ಏರಿಕೆ ಬಿಸಿ ತಪ್ಪಿಸಲು ತಮಿಳುನಾಡು ಸರ್ಕಾರ ಟೊಮೆಟೊ ಕುರಿತು ಮಹತ್ವದ ನಿರ್ಧಾರ ಕೈಗೊಂಡಿದೆ. ಬಹುತೇಕ ರಾಜ್ಯಗಳಲ್ಲಿ 100 ರೂ. ರಿಂದ 150 ರೂ ದರದಲ್ಲಿ ಟೊಮೆಟೊ ಮಾರಾಟವಾಗುತ್ತಿರುವ ಹಿನ್ನಲೆಯಲ್ಲಿ ಜನಸಾಮನ್ಯರಿಗೆ ಬೆಲೆ ಏರಿಕೆ ಬಿಸಿ ತಪ್ಪಿಸಲು ತಮಿಳುನಾಡು ಸರ್ಕಾರ ಪಡಿತರ ಅಂಗಡಿಗಳು ಅಥವಾ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಮಳಿಗೆಗಳ ಮೂಲಕ ಸಬ್ಸಿಡಿ ದರದಲ್ಲಿ ಟೊಮೆಟೊ ಮಾರಾಟ ಪ್ರಾರಂಭಿಸಿದೆ. ಟೊಮ್ಯಾಟೊ ಕೆಜಿಗೆ 60 ರೂ.ಗೆ ಮಾರಾಟವಾಗಲಿದೆ. ಮುಂದಿನ ದಿನಗಳಲ್ಲಿ ಚೆನ್ನೈ ಹೊರತುಪಡಿಸಿ ತಮಿಳುನಾಡಿನ ಜಿಲ್ಲೆಯಾದ್ಯಂತ ಎಲ್ಲಾ ಪಡಿತರ ಅಂಗಡಿಗಳಲ್ಲಿ ಟೊಮೇಟೊ ಮಾರಾಟವಾಗಲಿದೆ. ದೇಶಾದ್ಯಂತ ಟೊಮೆಟೊ ಬೆಲೆ ಹೆಚ್ಚಿದ್ದು, ರೈತರಿಂದ ನೇರವಾಗಿ ಟೊಮೆಟೊ ಖರೀದಿಸಿ ಮಾರುಕಟ್ಟೆಯ ಅರ್ಧದಷ್ಟು ಬೆಲೆಗೆ ಮಾರಾಟ ಮಾಡಲು ಕ್ರಮಕೈಗೊಳ್ಳುತ್ತಿದ್ದೇವೆ’ ಎಂದಿದೆ.