ಕೆನರಾ ಬ್ಯಾಂಕ್‌ ದರೋಡೆ ಪ್ರಕರಣ: ಮ್ಯಾನೇಜರ್ ಸೇರಿ ಮೂವರ ಬಂಧನ

ವಿಜಯಪುರ: ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್‌ನಲ್ಲಿ ನಡೆದಿದ್ದು ಕೋಟ್ಯಾಂತರ ಮೌಲ್ಯದ ದರೋಡೆ ಪುಕರಣವನ್ನು ಭೇದಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದ್ದಾರೆ
ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ತಿಂಗಳು 25 ರಂದು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್‌ನಲ್ಲಿ ಬ್ಯಾಂಕ್‌ ಲಾಕರ್‌ನಲ್ಲಿದ್ದ ಅಂದಾಜು 53.26 ಕೋಟಿ ರೂ. ಮೌಲ್ಯದ 58.97 ಕೆ.ಜಿ (58,976.94 ಗ್ರಾಂ.) ಬಂಗಾರದ ಆಭರಣಗಳು ಹಾಗೂ ನಗದು ಹಣ ರೂ. 5,20,450/-ಹೀಗೆ ಒಟ್ಟು 53,31,20,450/- ಕೋಟಿ ರೂ. ಮೌಲ್ಯದ ಬಂಗಾರದ ಆಭರಣಗಳು ಹಾಗೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದರು. ಈ ಪ್ರಕರಣದಲ್ಲಿ ಹುಬ್ಬಳ್ಳಿಯ ಆರೋಪಿಗಳಾದ ಸೀನಿಯರ್ ಮ್ಯಾನೇಜರ್ ಕೆನರಾ ಬ್ಯಾಂಕ್‌ನ ವಿಜಯಕುಮಾರ ಮಿರಿಯಾಲ, ಹುಬ್ಬಳ್ಳಿ ಖಾಸಗಿ ಉದ್ಯೋಗಿ ಚಂದ್ರಶೇಖರ ನೆರೆಲ್ಲಾ, 38 ವರ್ಷ ಹಾಗೂ ಸುನೀಲ ತಂದೆ ನಂರಸಿಂಹಲು ಮೋಕಾ, 40 ವರ್ಷ ಬಂಧಿತರು. ಆರೋಪಿತರು ವ್ಯವಸ್ಥಿತವಾಗಿ ಒಳಸಂಚು ಮಾಡಿ ಬ್ಯಾಂಕಿನಲ್ಲಿದ್ದ ಬೃಹತ್ ಮೊತ್ತದ ಬಂಗಾರದ ಆಭರಣಗಳನ್ನು ಹಾಗೂ ನಗದು ಹಣವನ್ನು ದೋಚಿಕೊಂಡು ಹೋಗಿದ್ದಲ್ಲದೇ, ತನಿಖೆಯ ದಿಕ್ಕು ತಪ್ಪಿಸುವಂತಹ ಹಲವಾರು ದೃಶ್ಯಾವಳಿಗಳನ್ನು ಸೃಷ್ಟಿಸಿದ್ದರೂ ಪ್ರಕರಣ ಭೇದಿಸಲಾಗಿದೆ ಅಲ್ಲದೇ, ಆರೋಪಿತರಿಂದ ಕೃತ್ಯಕ್ಕೆ ಬಳಸಿದ 02 ಕಾರುಗಳು ಹಾಗೂ ಕಾರುಗಳಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು 10 ಕೋಟಿ 75 ಲಕ್ಷ ರೂ. ಮೌಲ್ಯದ 10.5 ಕೆ.ಜಿ ಬಂಗಾರದ ಆಭರಣ ಹಾಗೂ ಆಭರಣ ಕರಗಿಸಿದ ಬಂಗಾರದ ಗಟ್ಟಿಗಳನ್ನು ವಶಪಡಿಸಿಕೊಂಡು, ಇನ್ನುಳಿದ ಆರೋಪಿತರು ಹಾಗೂ ಕಳುವಾದ ವಸ್ತುಗಳ ಪತ್ತೆ ಕಾರ್ಯಾಚರಣೆ ನಡೆಯುತ್ತಿದೆ ಎಂದರು.