ಬೆಂಗಳೂರು: ಮೋದಿ ಸರ್ಕಾರ ಈಗಾಗಲೇ 5 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ಕೊಡುತ್ತಿದೆ. ಇದೀಗ ಮತ್ತೆ 5 ಕೆ.ಜಿ. ಅಕ್ಕಿ ಸಬ್ಸಿಡಿ ದರದಲ್ಲಿ ಪಡೆದು ಸಿದ್ದರಾಮಯ್ಯ ಸರ್ಕಾರದ ಲೇಬಲ್ ಹಾಕಿ ಅನ್ನಭಾಗ್ಯ ಗ್ಯಾರಂಟಿ ನೀಡುವ ಪ್ಲಾನ್ ಮಾಡಿದ್ದ ಕಾಂಗ್ರೆಸ್ ಸರ್ಕಾರವು ಕಳೆದೊಂದು ವಾರದಿಂದ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಾ ಮೋದಿ ಸರ್ಕಾರದ ವಿರುದ್ಧ ಷಡ್ಯಂತ್ರ ಮಾಡುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ, ‘ಅನ್ನಭಾಗ್ಯ’ ವಿಚಾರವಾಗಿ ಮುಖ್ಯಮಂತ್ರಿ
ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ ಅವರು ವಸ್ತುಸ್ಥಿತಿ ತಿರುಚುವ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ.
ಇಲ್ಲಿ ಕೇಂದ್ರ ಸರ್ಕಾರ ಯಾವುದೇ ತಾರತಮ್ಯ ಮಾಡುತ್ತಿಲ್ಲ, ದರ ಸ್ಥಿರತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಎಲ್ಲಾ ರಾಜ್ಯಗಳಿಗೂ ಅನ್ವಯಿಸುವಂತೆ ಒಂದೇ ನಿಯಮ ಜಾರಿಗೆ ತಂದಿದೆ. ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂಬುದು ಸಿದ್ದರಾಮಯ್ಯನವರು ಹೇಳುತ್ತಿರುವ ಹಸಿ ಸುಳ್ಳು ಎಂದಿದ್ದಾರೆ.