Home ನಮ್ಮ ಜಿಲ್ಲೆ ಕೊಡಗು ಕೊಡಗು ಸೇರಿದಂತೆ ರಾಜ್ಯದ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಕೊಡಗು ಸೇರಿದಂತೆ ರಾಜ್ಯದ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಬೆಂಗಳೂರು: ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಐದು ದಿನ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಬೀದರ್, ಕಲಬುರಗಿ, ಯಾದಗಿರಿ ವಿಜಯಪುರ ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕೇರಳಕ್ಕೆ ಪ್ರಸಕ್ತ ಸಾಲಿನ ಮುಂಗಾರು ಪ್ರವೇಶವಾಗಿದೆ. 2009ರ ಬಳಿಕ ಮುಂಗಾರು ಸಾಕಷ್ಟು ಮುಂಚಿತವಾಗಿ ಪ್ರವೇಶವಾಗಿರುವುದು ಇದೇ ಮೊದಲು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ , ಕೇರಳ ಸೇರಿದಂತೆ ಹಲವೆಡೆ ಭಾರಿ ಮಳೆಯಾಗುತ್ತಿದೆ. ಬೆಳಗಾವಿ, ಧಾರವಾಡ, ಹಾಸನ ಹಾಗೂ ಮಂಡ್ಯ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಕಲಬುರಗಿ, ವಿಜಯಪುರ, ಗದಗ, ಹಾವೇರಿ, ಶಿವಮೊಗ್ಗ ಮತ್ತು ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಅಲ್ಲದೆ, ನಾಗರಿಕರ ಅನುಕೂಲಕ್ಕಾಗಿ ಸಹಾಯವಾಣಿಯನ್ನು ತೆರೆಯಲಾಗಿದೆ.

Exit mobile version