Home ಆರೋಗ್ಯ ಕೋವಿಡ್ ಲಸಿಕೆಗೂ ಹೃದಯಾಘಾತಕ್ಕೂ ಸಂಬಂಧವಿಲ್ಲ: ಐಸಿಎಂಆರ್ ಸ್ಪಷ್ಟನೆ

ಕೋವಿಡ್ ಲಸಿಕೆಗೂ ಹೃದಯಾಘಾತಕ್ಕೂ ಸಂಬಂಧವಿಲ್ಲ: ಐಸಿಎಂಆರ್ ಸ್ಪಷ್ಟನೆ

ಬೆಂಗಳೂರು: ಕೋವಿಡ್ -19 ಲಸಿಕೆ ಮತ್ತು ಆಕಸ್ಮಿಕವಾಗಿ ಸಾವುಗಳು ಸಂಭವಿಸುತ್ತಿರುವ ನಡುವೆ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ- ICMR ಹಾಗೂ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ -ಏಮ್ಸ್ ಸ್ಪಷ್ಟಪಡಿಸಿದೆ. ಇತ್ತಿಚೆಗೆ ಕರ್ನಾಟಕದ ಹಾಸನ ಜಿಲ್ಲೆಯೊಂದರಲ್ಲೇ ಇದುವರೆಗೆ ಹೃದಯಾಘಾತದಿಂದ ಸುಮಾರು 25 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ರಾಜ್ಯದ ಕೆಲವೆಡೆ ಇದೇ ರೀತಿಯ ಪ್ರಕರಣಗಳು ವರದಿಯಾಗಿದೆ. ಈ ಹಠಾತ್ ಸಾವುಗಳಿಗೆ ಕೋವಿಡ್ ಲಸಿಕೆಯೇ ಕಾರಣ ಎನ್ನುವ ಆರೋಪ ಕೇಳಿಬಂದಿತ್ತು. ಹೀಗಾಗಿ ಐಸಿಎಂಆರ್ ಸ್ಪಷ್ಟನೆ ನೀಡಿದ್ದು, ಕೋವಿಡ್ ಲಸಿಕೆಗೂ ಈ ಸಾವಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ. ಎದೆ ನೋವು ಅಥವಾ ಉಸಿರಾಟದ ತೊಂದರೆಯಂತಹ ಲಕ್ಷಣಗಳು ಕಂಡುಬಂದರೆ, ಎಲ್ಲರೂ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆ ಮಾಡಿಕೊಳ್ಳಬೇಕು ಮತ್ತು ಈ ಲಕ್ಷಣಗಳನ್ನು ನಿರ್ಲಕ್ಷಿಸಬಾರದು, ಲಸಿಕೆಯ ಬಗ್ಗೆ ಆಧಾರ ರಹಿತ ಆರೋಪಗಳು ಸಾರ್ವಜನಿಕರಲ್ಲಿ ಭಯವನ್ನುಂಟುಮಾಡಿ, ಲಸಿಕೆಯ ವಿರುದ್ಧ ಗೊಂದಲ ಸೃಷ್ಟಿಸಬಹುದು, ಇದು ಸಾರ್ವಜನಿಕ ಆರೋಗ್ಯಕ್ಕೆ ಹಾನಿಕಾರಕವಾಗಿದೆ ಎಂದು ತಿಳಿಸಿದೆ

Exit mobile version