ಗಾಂಜಾ ಮಾರಾಟ: ತಾಯಿ-ಮಗನಿಗೆ ಜೈಲು ಶಿಕ್ಷೆ

ಜೈಲು

ಶಿವಮೊಗ್ಗ: ಗಾಂಜಾ ಮಾರಾಟ ಪ್ರಕರಣದಲ್ಲಿ ತಾಯಿ, ಮಗನಿಗೆ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗ ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಶಿಕಾರಿಪುರ ಪಟ್ಟಣದ ನಿವಾಸಿಗಳಾದ ಯಾಸಿರ್ ಪಾಷಾ (27) ಹಾಗೂ ಈತನ ತಾಯಿ ಶಹಜಾನ್ ಯಾನೆ ಸಾನಿಯಾ ಬೇಗಂ (52) ಜೈಲು ಶಿಕ್ಷೆಗೆ ಗುರಿಯಾದವರೆಂದು ಗುರುತಿಸಲಾಗಿದೆ.
ಯಾಸಿರ್ ಪಾಷಾಗೆ ೬ ವರ್ಷ ಕಠಿಣ ಜೈಲು ಶಿಕ್ಷೆ, ೫೦ ಸಾವಿರ ರೂ. ದಂಡ ಹಾಗೂ ಶಹಜಾನ್ ಯಾನೆ ಸಾನಿಯಾ ಬೇಗಂಗೆ ೩ ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ೨೫ ಸಾವಿರ ರೂ. ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ನ್ಯಾಯಾಧೀಶರಾದ ಮಂಜುನಾಥ್ ನಾಯಕ್ ಅವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಸುರೇಶ್ ಕುಮಾರ್ ಎ.ಎಂ ಅವರು ವಾದ ಮಂಡಿಸಿದ್ದರು.
ಪ್ರಕರಣದ ಹಿನ್ನೆಲೆ: ೦೫-೧೨-೨೦೨೧ ರಂದು ಶಿಕಾರಿಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಶಿಕಾರಿಪುರ ಪಟ್ಟಣದ ಕುಂಬಾರಗುಂಡಿ ಏರಿಯಾದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಕುರಿ ತಂತೆ ಲಭ್ಯವಾದ ಖಚಿತ ವರ್ತಮಾನದ ಮೇರೆಗೆ, ಇನ್ಸ್‌ಪೆಕ್ಟರ್ ಗುರುರಾಜ್ ಮತ್ತವರ ಸಿಬ್ಬಂದಿ ದಾಳಿ ನಡೆಸಿದ್ದರು.
ತಾಯಿ ಹಾಗೂ ಮಗನ ವಿರುದ್ಧ ಶಿಕಾರಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸ ಲಾಗಿತ್ತು. ನಂತರ ಸಬ್‌ಇನ್‌ಸ್ಪೆಕ್ಟರ್ ಪ್ರಶಾಂತ್‌ಕುಮಾರ್ ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಆರೋಪ ಪಟ್ಟಿ ದಾಖಲಿಸಿದ್ದರು.