ಚಾಕಲೇಟ್ ಎಂದು ಮಾತ್ರೆ ನುಂಗಿ ಮಗು ಸಾವು

Advertisement

ಚಿತ್ರದುರ್ಗ: ಚಾಕೊಲೇಟ್​ ಎಂದು ಮಾತ್ರೆ ಸೇವಿಸಿ ನಾಲ್ಕು ವರ್ಷದ ಮಗು ಸಾವನ್ನಪ್ಪಿರುವ ಘಟನೆ ತಾಲೂಕಿನ ಕಡಬನಕಟ್ಟೆ ಗ್ರಾಮದಲ್ಲಿ ನಡೆದಿದೆ.
ಕಳೆದ 4 ದಿನಗಳ ಹಿಂದೆ ಮನೆಯಲ್ಲಿದ್ದ ಮಾತ್ರೆ ಸೇವಿಸಿದ್ದ ಮಗುವನ್ನು ಕೂಡಲೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಇಂದು ಚಿಕಿತ್ಸೆ ಫಲಿಸದೆ ಬಾಲಕ ಕೊನೆಯುಸಿರೆಳೆದಿದ್ದಾನೆ. ಹೃತ್ವಿಕ್(4) ಮೃತ ರ್ದುದೈವಿ. ಈ ಕುರಿತು ತುರುವನೂರು ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.