ಬೀದರ್: ಜನಿವಾರ ಧರಿಸಿದ ಅಭ್ಯರ್ಥಿ ಸುಚಿವೃತ ಕುಲಕರ್ಣಿಗೆ ಕೆ-ಸಿಇಟಿ ಪರೀಕ್ಷೆ ಬರೆಯಲು ಅವಕಾಶ ನೀಡದಿರುವುದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಅರಣ್ಯ, ಪರಿಸರ, ಜೀವಿಶಾಸ್ತ್ರ ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಘಟನೆ ಕುರಿತಂತೆ ಉಪ-ವಿಭಾಗಾಧಿಕಾರಿ ದರ್ಜೆಯ ಅಧಿಕಾರಿಯಿಂದ ತನಿಖೆ ನಡೆಸಿ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಿ 24 ಗಂಟೆಗಳ ಒಳಗಾಗಿ ವರದಿ ಸಲ್ಲಿಸುವಂತೆ ಬೀದರ್ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.