ಶಿರಾ: ಜೀನಿ ಕಂಪನಿ ಮಾಲೀಕ ದಿಲೀಪ್ ಕುಮಾರ್ ಮೇಲೆ ಅತ್ಯಾಚಾರ ಪ್ರಯತ್ನ, ಕೊಲೆ ಬೆದರಿಕೆ ಹಾಗೂ ಜಾತಿ ನಿಂದನೆ ದೂರು ದಾಖಲಾದ ಬೆನ್ನಲ್ಲೇ ನಾಪತ್ತೆಯಾಗಿದ್ದಾರೆ.
ಅವರ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವಳು ಬುಧವಾರ ರಾತ್ರಿ ಕಳ್ಳಂಬೆಳ್ಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ, ಪ್ರಕರಣ ದಾಖಲಾಗುತ್ತಿದ್ದಂತೆ ದಿಲೀಪ್ ಕುಮಾರ್ ನಾಪತ್ತೆಯಾಗಿದ್ದಾರೆ. ಶುಕ್ರವಾರ ಪೊಲೀಸರು ಕಂಪನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.