ಮೈಸೂರು: ಜೆಡಿಎಸ್ ಪಕ್ಷ ಅಧಿಕಾರಕ್ಕೆ ತರೋದು ನಮ್ಮ ಗುರಿ. ದೇವೇಗೌಡರು, ಕುಮಾರಣ್ಣ ನಾನು ಪಕ್ಷ ಸಂಘಟನೆ ಮಾಡ್ತೀವಿ. ಬಿಜೆಪಿ ಜೆಡಿಎಸ್ ನಡುವೆ ಸಮನ್ವಯತೆ ಕಾಪಾಡಿಕೊಳ್ಳುತ್ತೇವೆ. ಹೊಂದಾಣಿಕೆಯಿಂದ ಚುನಾವಣೆಗಳನ್ನ ಎದುರಿಸುತ್ತೇವೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದರು.
ನಗರಕ್ಕೆ ಶುಕ್ರವಾರ ಭೇಟಿ ನೀಡಿದ ವೇಳೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೆವೆ. ಕಾಂಗ್ರೆಸ್ ಯಾವುದೇ ವಿಚಾರಗಳ ಬಗ್ಗೆ ಮಾತನಾಡಲ್ಲ. ಅದು ನಮ್ಮ ಪಕ್ಷ ಅಲ್ಲ. ನಮ್ಮ ಪಕ್ಷ ಅಧಿಕಾರಕ್ಕೆ ತರಲು ಪ್ರಯತ್ನ ಮಾಡಲಾಗುವುದು ಎಂದರು.