ಟಿಪ್ಪರ್ ಡಿಕ್ಕಿ: ಇಬ್ಬರು ಬೈಕ್ ಸವಾರರು ಸಾವು

Advertisement

ದಾವಣಗೆರೆ: ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವು ಕಂಡಿರುವ ಘಟನೆ ಹರಿಹರದ ಹನಗವಾಡಿ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.

ಬಾತಿ ಗ್ರಾಮದ ರಾಕೇಶ್ (22), ಆಕಾಶ್ (23 ) ಸಾವನ್ನಪ್ಪಿದ ಬೈಕ್ ಸವಾರರು.

ಟಿಪ್ಪರ್ ಲಾರಿ ಚಾಲಕನ ಅಜಾಗರೂಕತೆಯಿಂದ ಈ ಅಫಘಾತ ಸಂಭವಿಸಿದ್ದು, ಮೃತದೇಹವನ್ನು ಹರಿಹರ ತಾಲ್ಲೂಕು ಆಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.