ಟ್ರಂಪ್ ಪ್ರತಿಕೃತಿ ದಹಿಸಿ ಪ್ರತಿಭಟನೆ

ಶಿವಮೊಗ್ಗ: ಪಾಕಿಸ್ತಾನದ ರಕ್ಷಣಾ ಸಚಿವ ಮುನೀರ್ ಅವರಿಗೆ ವೈಟ್ ಹೌಸ್‌ನಲ್ಲಿ ಜೂ. 18ರಂದು ಅಮೆರಿಕ ಅಧ್ಯಕ್ಷ ಟ್ರಂಪ್ ಔತಣಕೂಟವನ್ನು ಏರ್ಪಡಿಸಿದ್ದನ್ನು ಖಂಡಿಸಿ ಶುಕ್ರವಾರ ನಗರದ ಮಹಾವೀರ ವೃತ್ತದಲ್ಲಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನ ಮುಖಂಡರು ಕಪ್ಪುಪಟ್ಟಿ ಪ್ರದರ್ಶನ ಮಾಡಿ ಡೊನಾಲ್ಡ್ ಟ್ರಂಪ್ ಪ್ರತಿಕೃತಿ ದಹಿಸಿ ಪ್ರತಿಭಟಿಸಿದರು.
ಕಳೆದ ತಿಂಗಳು ಪ್ರವಾಸಿಗರ ಆಕರ್ಷಣೀಯ ಕೇಂದ್ರವಾಗಿದ್ದ ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ಪಾಕಿಸ್ತಾನ ಪೋಷಿತ ಉಗ್ರರು ಧರ್ಮಾಧಾರಿತವಾಗಿ 26 ಪ್ರವಾಸಿಗರ ಹತ್ಯೆಗೈದಿದ್ದರು. ಈ ಉಗ್ರಗಾಮಿಗಳಿಗೆ ಪಾಕಿಸ್ತಾನ ಸರ್ವ ರೀತಿಯಲ್ಲಿ ರಕ್ಷಣೆ ನಿಡುವುದಾಗಿ ಇದೇ ಪಾಪಿ ರಕ್ಷಣಾ ಸಚಿವರು ಬಹಿರಂಗವಾಗಿ ಘೋಷಣೆ ಮಾಡಿದ್ದರು. ಇಂತಹ ಪರಮನೀಚ ಪಾಕಿಸ್ತಾನ ಹಾಗೂ ಪಾಪಿಸ್ತಾನದ ರಕ್ಷಣಾ ಸಚಿವ ಮುನೀರ್‌ರವರಿಗೆ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಔತಣಕೂಟ ಏರ್ಪಡಿಸಿ ರಾಜಾತಿಥ್ಯ ನೀಡಿರುವುದನ್ನು ನಮ್ಮ ಸಂಘಟನೆಯು ತೀವ್ರವಾಗಿ ಖಂಡಿಸುತ್ತದೆ ಎಂದರು.