ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆಯಾಗುತ್ತಿದ್ದಂತೆಯೇ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮೊದಲ ಟ್ವೀಟ್ ಮಾಡಿದ್ದು, ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದಿದ್ದಾರೆ.