ಸತೀಶ್‌ ಜಾರಕಿಹೊಳಿ ಮತ ಚಲಾವಣೆ

0
49

ಬೆಳಗಾವಿ: ರಾಜ್ಯ ವಿಧಾನಸಭೆ ಚುನಾವಣೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಹಳೆ ವಂಟಮೂರಿಯಲ್ಲಿ ಸ್ಥಾಪಿಸಿದ ಮತಗಟ್ಟೆ ಕೇಂದ್ರ 95ರಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಅವರು ಮತ ಚಲಾಯಿಸಿದರು.
ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ಮತ ಚಲಾಯಿಸಿ ಮಾತನಾಡಿದ ಶಾಸಕ ಸತೀಶ್‌ ಜಾರಕಿಹೊಳಿ ಅವರು, ಮತದಾನ ನಮ್ಮ ಬಹುದೊಡ್ಡ ಜವಾಬ್ದಾರಿಯಾಗಿದ್ದು, ಎಲ್ಲರೂ ತಪ್ಪದೇ ಮತದಾನ ಮಾಡುವ ಮೂಲಕ ಸಂವಿಧಾನದ ಆಶಯಗಳನ್ನು ಈಡೇರಿಸಬೇಕೆಂದು ಮನವಿ ಮಾಡಿದರು.

Previous articleರಾಜ್ಯದ ಭವ್ಯ ಭವಿಷ್ಯ ಬರೆಯಲು ಮತದಾನ ಮಹತ್ವದ್ದು
Next articleಕಾಂಗ್ರೆಸ್ ಮುಖಂಡರ ಮೇಲೆ ಲಾಠಿ ಚಾರ್ಜ್ ಆರೋಪ