ಉಡುಪಿ: ಬ್ರಹ್ಮಾವರ ಸಮೀಪದ ಕುಂಜಾಲು ಮುಖ್ಯ ರಸ್ತೆಯಲ್ಲಿ ಶನಿವಾರ ರಾತ್ರಿ ಗೋವಿನ ರುಂಡ ಹಾಗೂ ದೇಹದ ಭಾಗಗಳು ಪತ್ತೆಯಾದ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶಪಾಲ್ ಸುವರ್ಣ ಭಾನುವಾರ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಕರ್ತರು ಹಾಗೂ ಸ್ಥಳೀಯರೊಂದಿಗೆ ಮಾಹಿತಿ ಪಡೆದರು.
ಈ ಘಟನೆಯ ಬಗ್ಗೆ ಸ್ಥಳೀಯರಲ್ಲಿ ಗೊಂದಲ ಮೂಡಿದ್ದು, ಪೊಲೀಸ್ ಅಧಿಕಾರಿಗಳು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಕೂಲಂಕಷ ತನಿಖೆ ನಡೆಸಿ ಶೀಘ್ರ ಅಪರಾಧಿಗಳನ್ನು ಬಂಧಿಸುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ರಾಜೀವ್ ಕುಲಾಲ್ ಹಾಗೂ ಸ್ಥಳೀಯರು ಇದ್ದರು.