ದರ್ಶನ್ ವಿಚಾರಣೆ ಸೆ. ೨೭ಕ್ಕೆ

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸೆಪ್ಟೆಂಬರ್ ೨೭ಕ್ಕೆ ಮುಂದೂಡಿ ಕೋರ್ಟ್ ಆದೇಶ ನೀಡಿದೆ. ಅಲ್ಲದೆ ಇದೇ ವೇಳೆ ಪ್ರಕರಣದ ಎ೧ ಆರೋಪಿ ಆಗಿರುವಂತಹ ಪವಿತ್ರಗೌಡ ಜಾಮೀನು ಅರ್ಜಿ ಸಹ ಸೆಪ್ಟೆಂಬರ್ ೨೫ಕ್ಕೆ ಮುಂದೂಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.