ಬೆಂಗಳೂರು: 2025-26ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ / ಪ್ರೌಢ ಶಾಲೆಗಳಲ್ಲಿ ಪ್ರಸ್ತುತ ಇರುವ ಕನ್ನಡ /ಇತರೆ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿಭಾಷಾ) ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಿ ಸರ್ಕಾರದ ಆದೇಶ ಹೊರಡಿಸಿದೆ.
ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವ ಕಾರ್ಯಕ್ರಮಗಳ ಭಾಗವಾಗಿ ರಾಜ್ಯ ಸರ್ಕಾರ ಇದೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ರಾಜ್ಯದ 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪ್ರಸ್ತುತ ಬೋಧಿಸುತ್ತಿರುವ ಕನ್ನಡ ಮಾಧ್ಯಮದ ಜತೆಯಲ್ಲೇ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಗಳನ್ನು ಆರಂಭಿಸಲು ಆದೇಶ ಹೊರಡಿಸಿದೆ. 2025-26ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ್ದಂತೆ ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲ ಬಳಸಿಕೊಂಡು ಈ ವರ್ಷ ಒಂದನೇ ತರಗತಿಗೆ ಆಂಗ್ಲ ಮಾಧ್ಯಮ ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ.