ನಾಳೆ ಚಳ್ಳಕೆರೆಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಪದಗ್ರಹಣ

ಚಳ್ಳಕೆರೆ: ಭಾರತೀಯ ಜನತಾ ಪಕ್ಷದ (ಬಿಜೆಪಿ) ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ನಾಳೆ, ಭಾನುವಾರ, ಜೂನ್ 29, 2025 ರಂದು ಬೆಳಿಗ್ಗೆ 11:30ಕ್ಕೆ ನಡೆಯಲಿದೆ. ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಲಾಯಿತು.
ಈ ಸಮಾರಂಭದಲ್ಲಿ ಪಕ್ಷದ ನೂತನ ಜಿಲ್ಲಾಧ್ಯಕ್ಷರಾದ ಶ್ರೀ ಕೆ.ಟಿ. ಕುಮಾರಸ್ವಾಮಿ ಅವರಿಗೆ ಅಭಿನಂದನಾ ಕಾರ್ಯಕ್ರಮ ಮತ್ತು ಮಂಡಲ ಅಧ್ಯಕ್ಷರಾದ ಶ್ರೀ ಬಿ.ಎಂ. ಸುರೇಶ್ ಹಾಗೂ ಮಂಡಲದ ನೂತನ ಪದಾಧಿಕಾರಿಗಳಿಗೂ ಸಹ ಪದಗ್ರಹಣ ನಡೆಯಲಿದೆ.
ಕಾರ್ಯಕ್ರಮವು ಚಳ್ಳಕೆರೆಯ ಶ್ರೀ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಜರುಗಲಿದ್ದು, ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಚಳ್ಳಕೆರೆ ಮಂಡಲದ ಖಜಾಂಚಿ ಶ್ರೀನಿವಾಸ್ ಬಿ. ಎಂ ಮನವಿ ಮಾಡಿದ್ದಾರೆ.