ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆ ಕೂಡ ಹೈವೋಲ್ಟೇಜ್ ಕದನವಾಗಿ ಮಾರ್ಪಟ್ಟಿದ್ದು, ನಿಖಿಲ್‌ ಕುಮಾರಸ್ವಾಮಿ ಬೃಹತ್​ ರೋಡ್​ ಶೋ ಮೂಲಕ ಸಾಗಿ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಮಾಜಿ ಸಿಎಂ ಡಿ ವಿ ಸದಾನಂದಗೌಡ, ಸಂಸದ ರಾಘವೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್, ಸಂಸದ ಯಧುವೀರ್ ಒಡೆಯರ್, ನಿಖಿಲ್ ಪತ್ನಿ ರೇವತಿ ಮೆರವಣಿಗೆಯಲ್ಲಿ ಸಾಥ್ ನೀಡಿದರು.