ಚಿಕ್ಕಮಗಳೂರು: ವಿಎಚ್ಪಿ ಮುಖಂಡ ಶರಣ್ ಪಂಪ್ವೆಲ್ಗೆ ಚಿಕ್ಕಮಗಳೂರು ಪ್ರವೇಶಕ್ಕೆ ಒಂದು ತಿಂಗಳ ಕಾಲ ಸಂಪೂರ್ಣ ನಿಷೇಧ ಹೇರಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮುಂದಿನ 30 ದಿನಗಳ ಕಾಲ ಪಂಪ್ವೆಲ್ಗೆ ಚಿಕ್ಕಮಗಳೂರು ಜಿಲ್ಲೆಗೆ ನಿರ್ಬಂಧ ಹೊರಡಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ನೀಡಿದ್ದಾರೆ.
ಚಿಕ್ಕಮಗಳೂರು ಸೇರಿ ಕೆಲ ಪಟ್ಟಣಗಳು ಮತೀಯ ಸೂಕ್ಷ್ಮ ಪ್ರದೇಶವಾಗಿದೆ. ಸಣ್ಣ ಘಟನೆಯೂ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಭಂಗ ತರುವ ಸಾಧ್ಯತೆಗಳಿವೆ ಹೀಗಾಗಿ ಜುಲೈ 6 ರಿಂದ ಆಗಸ್ಟ್ 4ರ ವರೆಗೆ 30 ದಿನಗಳ ಕಾಲ ನಿರ್ಬಂಧ ಹೇರಲಾಗಿದೆ. ಶರಣ್ ಪಂಪ್ವೆಲ್ ಮೇಲೆ 22ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಚಿಕ್ಕಮಗಳೂರು, ಮೂಡಿಗೆರೆ, ಆಲ್ದೂರಿನಲ್ಲಿ ಪಂಪ್ವೆಲ್ ಕರೆಸಿ ಬೈಠಕ್ ಹಮ್ಮಿಕೊಳ್ಳಲಾಗಿತ್ತು, ಈ ಹಿನ್ನೆಲೆಯಲ್ಲಿ ಮುಂದಿನ 30 ದಿನಗಳ ಕಾಲ ಪಂಪ್ವೆಲ್ಗೆ ಚಿಕ್ಕಮಗಳೂರು ಜಿಲ್ಲೆಗೆ ನಿರ್ಬಂಧ ಹೇರಲಾಗಿದೆ.