ವಾರಾಣಸಿ: ಪದ್ಮಶ್ರೀ ಪುರಸ್ಕೃತ ಯೋಗ ಗುರು ಸ್ವಾಮಿ ಶಿವಾನಂದ ಬಾಬಾ ಅವರು ನಿಧನರಾಗಿದ್ದಾರೆ.
ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ವಾರಾಣಸಿಯ ಬಿಎಚ್‌ಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ರಾತ್ರಿ ಅವರು ಮೃತರಾಗಿದ್ದಾರೆ, ಬಾಬಾ ಶಿವಾನಂದ್ ಅವರಿಗೆ 129 ವರ್ಷ ವಯಸ್ಸಾಗಿತ್ತು ಮತ್ತು ವಾರಣಾಸಿಯ ಕಬೀರ್ ನಗರದ ನಿವಾಸಿಯಾಗಿದ್ದರು ಎಂದು ಹೇಳಲಾಗುತ್ತದೆ. ಅವರು ತಮ್ಮ ಯೋಗ ಮತ್ತು ದಿನಚರಿಯ ಮೂಲಕ ದೀರ್ಘಾಯುಷ್ಯಕ್ಕಾಗಿ ದೇಶಾದ್ಯಂತ ಹೆಸರುವಾಸಿಯಾಗಿದ್ದರು. ಶಿವಾನಂದ ಅವರಿಗೆ 2022ರಲ್ಲಿ ಕೇಂದ್ರ ಸರ್ಕಾರ ಪದ್ಮಶ್ರೀ ಪುರಸ್ಕಾರ ನೀಡಿತ್ತು. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪ್ರಶಸ್ತಿ ಪ್ರದಾನ ಮಾಡಿದ್ದರು.