ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷಾ ಅವಧಿ ವಿಸ್ತರಣೆ

ಬೆಂಗಳೂರು: ಪರಿಶಿಷ್ಟ ಸಮುದಾಯಗಳ ಜಾತಿ ಸಮೀಕ್ಷೆಯ ಮನೆ ಮನೆ ಭೇಟಿಯ ಸಮೀಕ್ಷೆಯನ್ನು ಮೇ 17 ರಿಂದ 25 ವರೆಗೆ ವಿಸ್ತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್. ಸಿ ಮಹದೇವಪ್ಪ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಜಾತಿ ಒಳಮೀಸಲಾತಿಯ ಮನೆ-ಮನೆ ಭೇಟಿ ನೀಡಿ ಸಮೀಕ್ಷೆ ದಿನಾಂಕವನ್ನು ಮೇ. 25ರ ವರೆಗೆ ವಿಸ್ತರಿಸಲಾಗಿದೆ. ವಿಶೇಷ ಶಿಬಿರದ (ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ) ಅವಧಿಯನ್ನು ಮೇ 26 ರಿಂದ 28 ರವರೆಗೆ ಮರು ನಿಗದಿಪಡಿಸಲಾಗಿದೆ. ಆನ್‌ ಲೈನ್‌ ಮೂಲಕ ಸ್ವಯಂಘೋಷಣಾ ಅವಧಿಯನ್ನು ಮೇ 19 ರಿಂದ 25ರ ವರಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.