ಮೈಸೂರು: ಪರಿಹಾರ ಮೊತ್ತ 25 ಲಕ್ಷ ಅಲ್ಲ ಇಡೀ ಬಜೆಟ್ ಅನ್ನು ಪರಿಹಾರವಾಗಿ ಕೊಟ್ಟರು ಹೋಗಿರುವ ಜೀವ ವಾಪಸ್ ಬರುತ್ತಾ ಎಂದು ಸಚಿವ ವಿ.ಸೋಮಣ್ಣ ಪ್ರಶ್ನಿಸಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಲಿತ ಘಟನೆಯಿಂದ ಬೆಂಗಳೂರಿಗೆ ಅತ್ಯಂತ ಕೆಟ್ಟ ಹೆಸರು ಬಂದಿದೆ. ಸಿಎಂ ಪಟಲಾಂ ಮಾಡಿದ ಎಡವಟ್ಟಿನಿಂದ ಇಷ್ಟೆಲ್ಲಾ ಘಟನೆಗಳು ನಡೆದಿವೆ ಎಂದರು, ಸಿದ್ದರಾಮಯ್ಯ ಅವರಿಂದ ನಾವು ಇಂತಹ ಆಡಳಿತ ನಿರೀಕ್ಷೆ ಮಾಡಿರಲಿಲ್ಲ, ನಿಮ್ಮ ನಿಮ್ಮ ಒಳ ಜಗಳ ನಿಮ್ಮ ಒಳ ಒಪ್ಪಂದಗಳು ನಿಮ್ಮ ನಡುವಿನ ಗೊಂದಲಗಳಿಂದ ಅಮಾಯಕರ ಜೀವ ಹೋಗಿದೆ. ಇದಕ್ಕೆ ಯಾರು ಹೊಣೆ. ಸಿದ್ದರಾಮಯ್ಯನವರೇ ಇದಕ್ಕೆ ಹೊಣೆ ಅಲ್ವಾ. ಕಾಲ್ತುಳಿತ ಘಟನೆಗೆ ಡಾ.ರಾಜ್ ಕುಮಾರ್ ಅವರ ಸಾವಿನ ಘಟನೆಯನ್ನ ಹೇಗೆ ಹೋಲಿಕೆ ಮಾಡುತ್ತೀರಾ, ಡಾ.ರಾಜ್ ಕುಮಾರ್ ಅವರ ಸಾವಿನ ಸಂಧರ್ಭವೇ ಬೇರೆ ಅವತ್ತಿನ ಪರಿಸ್ಥಿತಿಯೇ ಬೇರೆ ಇವತ್ತಿನ ಪರಿಸ್ಥಿತಿಯೇ ಬೇರೆ.
ನೀವು ಈಗ ಮಾಡಿರುವುದು ಪಾಪದ ಕೆಲಸ, ಮೊದಲು ಅದನ್ನು ನೀವು ಒಪ್ಪಿಕೊಳ್ಳಬೇಕು ಎಂದು ಹೇಳಿದರು, ಕುರ್ಚಿಗೆ ಅಂಟಿಕೊಂಡು ಸಿದ್ದರಾಮಯ್ಯ ಈ ಮಟ್ಟಕ್ಕೆ ಇಳಿಯುತ್ತಾರೆ ಎಂದು ನಾನು ಅಂದು ಕೊಂಡಿರಲಿಲ್ಲ, ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಕೊಟ್ಟಿರುವ ಫ್ರೀ ನೆಸ್ ಬೇರೆ ರಾಜ್ಯದ ಯಾವ ಸಿಎಂಗೂ ಕೊಟ್ಟಿಲ್ಲ, ಆದರೂ ಸಿದ್ದರಾಮಯ್ಯ ಇಂತಹ ಕೆಟ್ಟ ಆಡಳಿತ ನಡೆಸುತ್ತಿದ್ದಾರೆ, ಒಂದು ಅರ್ಧ ದಿನ ಪ್ರಧಾನ ಮಂತ್ರಿಗಳ ಕಚೇರಿಗೆ ಬನ್ನಿ ಪ್ರಧಾನ ಮಂತ್ರಿಗಳು ಹೇಗೆ ಕೆಲಸ ಮಾಡುತ್ತಾರೆ ಎಂಬುದನ್ನ ನೋಡಿ.
ನೀವು ಕಾಂಗ್ರೆಸ್ ಮುಖ್ಯಮಂತ್ರಿಯಾಗಿರಬಹುದು ಪ್ರಧಾನಿ ಆಡಳಿತವನ್ನ ಸ್ವಲ್ಪ ಗಮನಿಸಿ ನೋಡಿ, ಸಿಎಂ ಡಿಸಿಎಂ ನಡುವೆ ಹೊಂದಾಣಿಕೆಯೇ ಇಲ್ಲದ ಕಾರಣ ಎಲ್ಲೆಲ್ಲೋ ಮುಗ್ಗರಿಸುತ್ತಿದೆ, ಅಫಘಾತ ಮಾಡುತ್ತಿದೆ. ಇವರ ಈ ಅಧ್ವಾನದಲ್ಲಿ ಅಮಾಯಕರ ಜೀವ ಹೋಗುತ್ತಿದೆ.
ಇದು ನನಗೆ ಬೇಸರ ತರಿಸಿದೆ, ಬೆಂಗಳೂರಿನ ಕಾಲ್ತುಳಿತಕ್ಕೆ ದೇಶದ ಬೇರೆ ಬೇರೆ ಭಾಗದ ಘಟನೆಯನ್ನ ನೀವು ಹೇಗೆ ಸಮರ್ಥನೆಗೆ ಬಳಸುತ್ತಿದ್ದೀರಾ. ನೀವು ಮಾಡಿರುವುದು ಪಾಪದ ಕೆಲಸ, ಇದಕ್ಕೆ ಸಮರ್ಥನೆಗಳು ಬೇಡ, ಮೊದಲು ನೈತಿಕ ಹೊಣೆ ಹೊತ್ತಿಕೊಳ್ಳಿ, ನನಗೆ ಸಿದ್ದರಾಮಯ್ಯ ಮೇಲೆ ವೈಯಕ್ತಿಕವಾಗಿ ಗೌರವ ಇದೆ, ಆದರೆ ಆಡಳಿತ ಯಾವ ಪರಿಸ್ಥಿತಿಯಲ್ಲಿದೆ ನೋಡಿ, ಎರೆಡುವರೆ ವರ್ಷದ ಸರ್ಕಾರದದಲ್ಲಿ ಈ ರಾಜ್ಯಕ್ಕೆ ಯಾವ ಮೈಲಿಗಲ್ಲು ಕೊಟ್ಟಿದ್ದೀರಾ ನೀವೇ ನೋಡಿಕೊಳ್ಳಿ.
ನಿಮ್ಮ ಪಟಲಾಮ್ ಮಾಡಿದ ತಪ್ಪಾಗಿ ಅಧಿಕಾರಿಗಳನ್ನ ತಪ್ಪು ಮಾಡಿದ್ದು ಎಷ್ಟು ಸರಿ, ಆರ್‌ಸಿಬಿ ಅವರು ಗೆದ್ದರು, ಅದರ ಕ್ರೆಡಿಟ್ ಪಡೆಯಲು ನೀವು ಪೈಪೋಟಿ ನಡೆಸಲು ಹೋಗಿ ಈ ಅವಘಡ ಮಾಡಿಕೊಳ್ಳಲಾಗಿದೆ, ಬೇರೆ ಇನ್ಯಾರೋ ಕ್ರೆಡಿಟ್ ತೆಗೆದುಕೊಳ್ಳುತ್ತಾರೆ ಎಂದು ನೀವೆ ಅಚಾತುರ್ಯಾ ಮಾಡಿ ಅಮಾಯಕರ ಬಲಿ ಕೊಟ್ರಿಎಂದು ಆಕ್ರೋಶ ಪಡಿಸಿದರು.