ಬಾಲಕಿ ರುಂಡದೊಂದಿಗೆ ಪರಾರಿಯಾಗಿದ್ದ ಪ್ರಕಾಶ ಶವವಾಗಿ ಪತ್ತೆ

ಕೊಡಗು: ನಿಶ್ಚಿತಾರ್ಥ ಮುಂದೂಡಿದ ಕೋಪದಲ್ಲಿ 16 ವರ್ಷದ ಬಾಲಕಿಯ ತಲೆ ಕಡಿದು ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿ ಯುವಕನೂ ಕೂಡ ಶವವಾಗಿ ಪತ್ತೆಯಾಗಿದ್ದಾನೆ.
ಸೋಮವಾರಪೇಟೆಯ ಸೂರ್ಲಬ್ಬಿ ಗ್ರಾಮದ ವಿದ್ಯಾರ್ಥಿನಿ ಮೀನಾಳನ್ನು ಪ್ರಕಾಶ್ ಬರ್ಬರವಾಗಿ ಹತ್ಯೆ ಮಾಡಿದ್ದು ಈತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಆದರೆ ನೇಣುಬಿಗಿದ ಸ್ಥಿತಿಯಲ್ಲಿ ಕೊಲೆ‌ ಆರೋಪಿ ಪ್ರಕಾಶ(35) ಶವ ಪತ್ತೆಯಾಗಿದೆ.
ಸೋಮವಾರಪೇಟೆಯ ಸೂರ್ಲಬ್ಬಿ ಗ್ರಾಮದ ಹಮ್ಮಿಯಾಲದಲ್ಲಿ ಮೃತದೇಹ ಪತ್ತೆಯಾಗಿದೆ. ಕೊಲೆ ನಡೆದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ನಡೆಸುತ್ತಿರುವಾಗ ಮೃತದೇಹ ಪತ್ತೆಯಾಗಿದೆ. ಬಾಲಕಿಯ ರುಂಡ ಇನ್ನೂ ಪತ್ತೆಯಾಗಿಲ್ಲ, ಶೋಧ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.