ಬಿಜೆಪಿಯಿಂದ ಈಶ್ವರಪ್ಪ ಉಚ್ಚಾಟನೆ

Advertisement

ಬೆಂಗಳೂರು: ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಕೆ.ಎಸ್‌. ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಿದೆ.
ಪಕ್ಷದ ಸೂಚನೆಯನ್ನು ಧಿಕ್ಕರಿಸಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷಕ್ಕೆ ಮುಜುಗರ ತಂದಿದ್ದೀರಿ. ಆದ್ದರಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ 6 ವರ್ಷ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.